ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ನೆತ್ತರ ಶಾಲಾ ವಾರ್ಷಿಕೋತ್ಸವ’ ಕಾರ್ಯಕ್ರಮ

ಹೃತ್ಪೂರ್ವಕ ಆಮಂತ್ರಣ
ದ.ಕ.ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ನೆತ್ತರ, ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ (ರಿ.), ಭಾಗ್ಯಶ್ರೀ ಮಹಿಳಾ ಮಿತ್ರ ಮಂಡಳಿ ನೆತ್ತರ, ಶಾಲಾಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ ಹಾಗೂ ಗ್ರಾಮದ ವಿದ್ಯಾಭಿಮಾನಿಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕೊಳವೆ ಬಾವಿ ನಿರ್ಮಾಣ ಮತ್ತು ಶಾಲಾ ಮೈದಾನ ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳ ಪ್ರಯುಕ್ತ ‘ಶಾಲಾ ವಾರ್ಷಿಕೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 
ಈ ಸಂಭ್ರಮದ ಕಾರ್ಯಕ್ರಮವು ದಿನಾಂಕ 27-11-2026 ರಂದು ಶುಕ್ರವಾರ ನೆತ್ತರ ಶಾಲಾ ವಠಾರದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9:00 ಗಂಟೆಗೆ ಉದ್ಘಾಟನಾ ಸಮಾರಂಭ ಹಾಗೂ ಮಹಿಳೆಯರು ಮತ್ತು ಪುರುಷರಿಗಾಗಿ ವಿವಿಧ ಆಕರ್ಷಕ ಸ್ಪರ್ಧೆಗಳು (ರೀಲ್ಸ್ ಕಾಂಪಿಟೇಷನ್, ಫ್ಯಾಷನ್ ಶೋ, ಕೇಶ ವಿನ್ಯಾಸ, ರಂಗೋಲಿ, ಮೇಕಪ್, ಮೆಹಂದಿ, ಬೆಸ್ಟ್ ಜೀನ್ಸ್ ಪ್ಯಾಂಟ್ ಮಾಡೆಲ್, ಎಥ್ನಿಕ್ ಫಿಸಿಕ್) ನಡೆಯಲಿವೆ. ತದನಂತರ ಸಂಜೆ 6:00 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.
(ಸ್ಪರ್ಧೆಗಳಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಲು ಸಂಪರ್ಕಿಸಿ:77951 44863





