ಮಹಾಮಸ್ತಕಾಭಿಷೇಕ ಮಹೋತ್ಸವ: ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಭೇಟಿ

ಮಹಾಮಸ್ತಕಾಭಿಷೇಕ ಮಹೋತ್ಸವ: ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಭೇಟಿ
ಕಾರ್ಕಳ: ಶ್ರೀ ಬಾಹುಬಲಿ ಸ್ವಾಮಿಯ ಮುಂಬರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಮಹೋತ್ಸವದ ಕಾಯಾಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ. ಈ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ನೀಡುವಂತೆ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ಈ ಕುರಿತು ಆದಷ್ಟು ಬೇಗ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿಗಳ ಸಕಾರಾತ್ಮಕ ಸ್ಪಂದನೆ ಮಹಾಮಸ್ತಕಾಭಿಷೇಕ ಮಹೋತ್ಸವದ ಸಿದ್ಧತೆಗಳಿಗೆ ಮತ್ತಷ್ಟು ಬಲ ನೀಡಿದ್ದು, ಕಾರ್ಕಳದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದ ಸಹಕಾರ ದೊರೆಯುವ ನಿರೀಕ್ಷೆ ಮೂಡಿದೆ.




