ತಾಲೂಕು

ತಾಯಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಮಾನಸಿಕ ಅಸ್ವಸ್ಥ ಮಗ ಆರೋಪಿಯನ್ನು ಸೆರೆಹಿಡಿಯಲು ಖಾಕಿ ಹರಸಾಹಸ ಪಟ್ಟ ಘಟನೆ

Share News

ತಾಯಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಮಾನಸಿಕ ಅಸ್ವಸ್ಥ ಮಗ ಆರೋಪಿಯನ್ನು ಸೆರೆಹಿಡಿಯಲು ಖಾಕಿ ಹರಸಾಹಸ ಪಟ್ಟ ಘಟನೆ

 

ತಾಯಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಮಾನಸಿಕ ಅಸ್ವಸ್ಥ ಮಗನನ್ನು ಸೆರೆಹಿಡಿಯಲು ಖಾಕಿ ಹರಸಾಹಸ ಪಟ್ಟ ಘಟನೆ ಜರುಗಿದೆ.ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಕುರುಬರ ಓಣಿಯಲ್ಲಿ ನಡೆದಿದೆ.

ಮಾನಸಿಕ ಅಸ್ವಸ್ಥರಾಗಿರುವ ಶಿವಪ್ಪ ತಟ್ಟಿ ಎಂಬಾತ ತನ್ನ ತಾಯಿ ಗೌರವ್ವನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದು ಗೌರವ್ವನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ರೋಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಶಿವಪ್ಪ ಈ ಹಿಂದೆ ತಂದೆ ಮೇಲೂ ಹಲ್ಲೆ ಮಾಡಿದ್ದ. ಈಗ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಇತ್ತೀಚೆಗೆ ತಾವು ಸಾಕಿದ್ದ ಕುದುರೆಯನ್ನೂ ಸಹ ಕೊಡಲಿಯಿಂದ ಹೊಡೆದು ಸಾಯಿಸಿದ್ದನಂತೆ.

ತಾಯಿಯ ಮೇಲೆ ಹಲ್ಲೆ ನಡೆಸಿ ರೋಡಿಗೆ ಬಂದು ಸಾರ್ವಜನಿಕರಿಗೂ ಕೊಡಲಿ ಝಳಪಿಸಿ ಅಟ್ಟಹಾಸ ಮೆರೆದಿದ್ದಾನೆ. ಈ ವೇಳೆ ಆತಂಕಗೊಂಡ ಸಾರ್ವಜನಿಕರು 112ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ ಆರೋಪಿಯನ್ನು ಹಿಡಿಯಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಸತತ ಒಂದು ಗಂಟೆಗಳ ಕಾರ್ಯಾಚರಣೆ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

 


Share News

ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Leave a Reply

Your email address will not be published. Required fields are marked *

Back to top button
error: Content is protected !!